ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಅಂತಾ ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲಾಗಿದೆ. ಚಿಕ್ಕಮಗಳೂರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.
ಬಿಜೆಪಿ ಮುಖಂಡ ಸಿ.ಟಿ.ರವಿ ಸ್ವಗ್ರಾಮ ಚಿಕ್ಕಮಾಗರಹಳ್ಳಿಯ ಯುವಕರು ದೂರು ದಾಖಲಿಸಿದ್ದಾರೆ. ರಾಷ್ಟ್ರಧ್ವಜದ ಬಣ್ಣ ವಿವರಿಸುವ ವೇಳೆ ಸಿದ್ದರಾಮಯ್ಯ ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೇಸರಿ ಜಾಗದಲ್ಲಿ ಕೆಂಪು ಎಂದಿದ್ದರು. ಇದು ಆಕ್ರೋಶಕ್ಕೆ ಕಾರಣವಾಗಿದ್ದು ಈಗ ದೂರು ದಾಖಲಾಗಿದೆ. ಸಿದ್ದರಾಮಯ್ಯರ ಈ ಮಾತಿಗೆ ಕೆಲವರು ಆಕ್ರೋಶ ಹೊರಹಾಕಿದ್ರೆ ಇನ್ನು ಕೆಲವರು ಕೇಸರಿ ಅಂದ್ರೆ ಭಯನಾ ಅಂತಾನೂ ಪ್ರಶ್ನೆ ಮಾಡಿದ್ದರು.
ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿಯವರ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಮಾಜಿ ಸಿಎಂ ವಿರುದ್ಧ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





