Breaking News

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : 3 ಜನ ಬಂಧನ


ಪುತ್ತೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ವರದಿಯಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದ ಪ್ರಮುಖ ಆರೋಪಿಗಳಾದ ಶಿಯಾಬ್, ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದ್ದು, ಮೂವರು ಸುಳ್ಯ ಮೂಲದವರು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಪೊಲೀಸರು ಆರೋಪಿಗಳನ್ನು ಸುಳ್ಯದಿಂದ ಮಂಗಳೂರಿಗೆ ಕರೆದುಕೊಂಡು ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.‌ ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ನೀಡುವ ಸಾಧ್ಯತೆಯಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧಿಸಿದಂತೆ ಬಂಧಿತರಾದ ಆರೋಪಿಗಳ ಸಂಖ್ಯೆ ಹತ್ತಕ್ಕೇರಿದೆ. ಇದುವರೆಗೆ ಹಲವು ಹಂತಗಳನ್ನು ಏಳು ಮಂದಿಯನ್ನು ಸೆರೆ ಹಿಡಿಯಲಾಗಿತ್ತು. ಇದೀಗ ಹತ್ಯೆ ಮಾಡಿದ್ದ ಮೂವರು ಪೊಲೀಸ್ ಬಲೆಗೆ ಬಿದ್ದಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *