ಬೆಂಗಳೂರು: “ಕಾಂಗ್ರೆಸ್ ನಾಯಕರು ರಾಜಕೀಯ ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿಯೇ ಅವರೆಲ್ಲ ನಾಯಕತ್ವ ಬದಲಾವಣೆ ಕುರಿತು ಸುಳ್ಳು ಸುದ್ದಿ ಹರಡುವ ಮೂಲಕ ತಾವು ಸುದ್ದಿಯಲ್ಲಿರುವ ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿಡಿ ಕಾರಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಾಯಕತ್ವ ಬದಲಾವಣೆ ಕುರಿತು ಸುಳ್ಳು ಸುದ್ದಿ ಹೇಳುವ ಮೂಲಕ ರಾಜಕೀಯ ನಿರುದ್ಯೋಗಿಗಳಾಗಿರುವ ಕಾಂಗ್ರೆಸ್ ನಾಯಕರು ತಾವು ಸುದ್ದಿಯಲ್ಲಿರಲು ಪ್ರಯತ್ನಿಸುತ್ತಿದ್ದಾರೆ. ರಾಜಕೀಯವಾಗಿ ಕ್ರಿಯಾಶೀಲರಾಗಿರಲು ಕಾಂಗ್ರೆಸ್ ನಾಯಕರು ಹೆಣಗಾಡುತ್ತಿದ್ದಾರೆ. ಅವರ ಈ ಅಜ್ಞಾನಕ್ಕೆ ನಗಬೇಕು” ಎಂದು ಲೇವಡಿ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





