ಮೈಸೂರು: ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಸಗೂರಿನ ಎತ್ತಿಗೆ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಕೇರಳ ಮೂಲದ ರೈತ ಬಾಲನ್ (60) ಮೃತ ದುರ್ದೈವಿ. ಕೇರಳ ಮೂಲದ ಬಾಲನ್, ಎತ್ತಿಗೆ ಗ್ರಾಮದ ಜಮೀನು ಗುತ್ತಿಗೆ ಪಡೆದು ಕೃಷಿ ಚಟುವಟಿಕೆ ನಡೆಸುತ್ತಿದ್ದರು. ನಿನ್ನೆ ತಡರಾತ್ರಿ ಜಮೀನಿನತ್ತ ಬರುತ್ತಿದ್ದ ಆನೆಯನ್ನು ಗ್ರಾಮಸ್ಥರು ಹೆಮ್ಮೆಟ್ಟಿಸಿದ್ದರು. ಈ ವೇಳೆ ಆನೆ ಏಕಾಏಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ಬಾಲನ್ ಸಾವನ್ನಪ್ಪಿದ್ದಾರೆ.
ಕಾಡಾನೆಗಳ ಹಾವಳಿಗೆ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





