ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕರಾದ ನರ್ಗಿಸ್ ಬಾಬು ಅವರು ವಿಧಿವಶರಾಗಿದ್ದಾರೆ.. ಅವರಿಗೆ 76 ವರ್ಷ ವಯಸ್ಸಾಗಿತ್ತು.. ನರ್ಗಿಸ್ ಬಾಬು ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ನರ್ಗಿಸ್ ಬಾಬು ಅವರು ಹಲವು ದಿನಗಳಿಂದಲೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಂಜೆ 7 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ..
ನರ್ಗಿಸ್ ಬಾಬು ಹಲವು ಸ್ಟಾರ್ ನಟರ ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ.. ನರ್ಗಿಸ್ ಆಂಡ್ ಎಂಟರ್‌ಪ್ರೈಸಸ್ ಮೂಲಕ ಚಿತ್ರ ಹಂಚಿಕೆ ಮಾಡುತ್ತಿದ್ದ ವರು ಸುಂದರ ಪುರುಷ ಸಿನಿಮಾ ಮೂಲಕ ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡಿದರು.. ಆ ನಂತರ 23 ಚಿತ್ರಗಳನ್ನ ನಿರ್ಮಾಣ ಮಾಡಿದರು.. 600ಕ್ಕೂ ಹೆಚ್ಚು ಸಿನಿಮಾಗಳನ್ನ ವಿತರಣೆ ಮಾಡಿದ್ದಾರೆ. ಯಾರಿಗೆ ಬೇಡ ದುಡ್ಡು, ಧನ್ ಧನಾ ಧನ್, ಅನಂತ್ ಗೌಡ ವರ್ಸಸ್ ರೆಡ್ಡಿ ಹೀಗೆ ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ..
ಅಂದ್ಹಾಗೆ ಅನಂತ್ ನಾಗ್, ಶಶಿಕುಮಾರ್ , ನೆನಪಿರಲಿ ಪ್ರೇಮ್ ಸೇರಿದಂತೆ ಹಲವು ಸ್ಟಾರ್ ಗಳ ಸಿನಿಮಾಗಳಿಗೆ ಇವರು ಬಂಡವಾಳ ಹೂಡಿದ್ದಾರೆ.. ನರ್ಗಿಸ್ ಅವರಿಗೆ 6 ಜನ ಮಕ್ಕಳು ಅದರಲ್ಲಿ ಇಬ್ಬರು ಮಕ್ಕಳು ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ಧಾರೆ..
bigtvnews | Hubli Dharwad News | Kannada News | Karnataka News Hubli News | News In Hubli | Local news





