Breaking News

ಟ್ರ್ಯಾಕ್ಟರ್ ಹಾಗೂ ಬೈಕ್ ಅಪಘಾತ , ಓರ್ವ ಸಾವು

ಧಾರವಾಡ : ತಾಲೂಕಿನ ನವಲಗುಂದ ಗುಡಿಸಾಗರ ಗ್ರಾಮದ ಬಳಿ ತಡ ರಾತ್ರಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ . ಪರಿಣಾಮ ಬೈಕ್‌ನ ಹಿಂಬದಿ ಕುಳಿತಿದ್ದ ಓರ್ವ ಮೃತ ಪಟ್ಟಿದ್ದು , ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನವಲಗುಂದ ತಾಲೂಕಾ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ .

ಗುಡಿಸಾಗರ ಗ್ರಾಮದ ಗುಂಡುಲಿಂಗೇಶ್ವರ ದೇವಸ್ಥಾನದ ಬಳಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ದುರ್ದೈವಿಯನ್ನು ಸುಮಾರು 37 ವರ್ಷ ವಯಸ್ಸಿನ ಬಸವರಾಜ್ ಮಲ್ಲಿಕಾರ್ಜುನ ಪಟ್ಟಿದ ಎಂದು ಗುರುತಿಸಲಾಗಿದೆ . ಬೈಕ್‌ನ ಹಿಂಬದಿ ಕುಳಿತ ಬಸವರಾಜ್ ಮೃತ ಪಟ್ಟಿದ್ದಾನೆ . ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ . ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ .

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *