Breaking News

ಆ.28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ


ಬೆಂಗಳೂರು: ಪಕ್ಷದ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ರದ್ದುಪಡಿಸಿದ್ದ ‘ಜನೋತ್ಸವ’ ಕಾರ್ಯಕ್ರಮಕ್ಕೆ ಸರ್ಕಾರ ಮತ್ತೆ ಸಜ್ಜಾಗಿದ್ದು, ರಾಜ್ಯದ ಐದಾರು ಕಡೆ ಜನೋತ್ಸವ ನಡೆಸಿ ನಂತರ ದೊಡ್ಡ ಮಟ್ಟದಲ್ಲಿ ಸಮಾರೋಪ ಸಮಾರಂಭ ಆಯೋಜಿಸಲು ತೀರ್ಮಾನಿಸಿದೆ.

ಈ ನಿಟ್ಟಿನಲ್ಲಿ ಆಗಸ್ಟ್‌ 28ರಂದು ದೊಡ್ಡಬಳ್ಳಾಪುರದಲ್ಲಿ ಮೊದಲ ಹಂತದ ಕಾರ್ಯಕ್ರಮ ನಡೆಸಲು ನಿರ್ಧಾರ ಕೈಗೊಂಡಿದೆ. ಈ ಮಧ್ಯೆ, ಸಮಾರೋಪ ಸಮಾರಂಭವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟು ಹಬ್ಬದ ಅಮೃತಮಹೋತ್ಸವ ನಡೆದ ದಾವಣಗೆರೆಯಲ್ಲೇ ನಡೆಸಲು ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌ ಅವರು ‘ಜನೋತ್ಸವ’ ಕಾರ್ಯಕ್ರಮ ಆಯೋಜನೆ ಬಗ್ಗೆ ಖಚಿತ ಮಾಹಿತಿ ನೀಡಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *