Breaking News

ಕಳೆದ 24ಗಂಟೆಯಲ್ಲಿ 15,815 ಕೋವಿಡ್ ದೃಡ


ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 15,815 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 68 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಆಗಸ್ಟ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಒಂದೇ ದಿನದಲ್ಲಿ ದೇಶದಲ್ಲಿ 4,271 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇದರೊಂದಿಗೆ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,19,264ಕ್ಕೆ ತಲುಪಿರುವುದಾಗಿ ಅಂಕಿಅಂಶದಲ್ಲಿ ವಿವರಿಸಲಾಗಿದೆ.

ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ 68 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,26,996ಕ್ಕೆ ಏರಿಕೆಯಾಗಿದೆ. ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ ಕೂಡಾ 4,42,39,372ಕ್ಕೆ ಹೆಚ್ಚಳವಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *