Breaking News

ಕೆಸಿಸಿ ಬ್ಯಾಂಕ್ ಗಮನಸೆಳೆದ ತಿರಂಗಾ ಯಾತ್ರೆ

ಧಾರವಾಡ: ಆಝಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಇಂದು (ಶನಿವಾರ) ಕೆಸಿಸಿ ಬ್ಯಾಂಕ್ ಮತ್ತು ನಬಾರ್ಡ್ ಸಹಯೋಗದಲ್ಲಿ ನಗರದಲ್ಲಿ ಸಂಭ್ರಮದಿಂದ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಚಾಲನೆ ನೀಡಿ, ಮಾತನಾಡಿ, ಅವಿಭಜಿತ ಧಾರವಾಡ ಜಿಲ್ಲೆಯ ಕಾರ್ಯವ್ಯಾಪ್ತಿ ಹೊಂದಿರುವ ಕೆಸಿಸಿ ಬ್ಯಾಂಕ್ ರೈತರು ಮತ್ತು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ. ಆರ್ಥಿಕವಾಗಿ ಸದೃಢವಾಗಿ ಹೆಚ್ಚಿನ ಸೌಲಭ್ಯಗಳನ್ನು ನೀಡುತ್ತಿದೆ. ಗ್ರಾಹಕರ ವಿಶ್ವಾಸ ಗಳಿಸಿರುವ ಬ್ಯಾಂಕ್, ನ್ಯಾಪಕಾಬ್ಸ್ ಪ್ರಶಸ್ತಿ ಗೆ ಭಾಜನವಾಗಿರುವುದು‌ಸಂತಸದ ಸಂಗತಿ. ಬ್ಯಾಂಕಿನ ಆಡಳಿತ ಮಂಡಳಿಯ ಶ್ರಮ ಶ್ಲಾಘನೀಯ ಎಂದರು.

ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಮೇಯರ್ ಈರೇಶ ಅಂಚಟಗೇರಿ, ಕೆಸಿಸಿ ಬ್ಯಾಂಕಿನ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ, ಉಪಾಧ್ಯಕ್ಷ ಎಸ್.ವೈ.ಪಾಟೀಲ, ನಿರ್ದೇಶಕರು, ನಬಾರ್ಡ್ ವ್ಯವಸ್ಥಾಪಕ ಮಯೂರ ಕಾಂಬಳೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಎಸ್.ವಿ.ಹೂಗಾರ ಇನ್ನಿತರರು ಇದ್ದರು.

ನಗರದ ಸುಭಾಸ ರಸ್ತೆಯಲ್ಲಿರುವ ಪ್ರಧಾನ ಕಚೇರಿಯಿಂದ ಆರಂಭವಾದ ಯಾತ್ರೆಯು ಪ್ರಮುಖ ಮಾರ್ಗಗಳಲ್ಲಿ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಮುಕ್ತಾಯವಾಯಿತು. ಯಾತ್ರೆಯಲ್ಲಿ ಅಲಂಕೃತ ಬ್ಯಾಂಕಿನ ಎ.ಟಿ.ಎಂ.ವಾಹನಗಳು, ಜಗ್ಗಲಗಿ ಮೇಳ, ಎತ್ತಿನ ಬಂಡಿ, ಟ್ರ್ಯಾಕ್ಟರ್‌ಗಳು ಹಾಗೂ ಸಮವಸ್ತ್ರ ಧರಿಸಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ಗಮನಸೆಳೆದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *