Breaking News

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ರಾಜಧಾನಿಯಲ್ಲಿ ಭಾರೀ ಬಿಗಿಬಂದೋಬಸ್ತ್‌


ನವದೆಹಲಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭರ್ಜರಿ ಸಂಭ್ರಮಾಚರಣೆಗೆ ನವದೆಹಲಿ ಸಜ್ಜಾಗಿದ್ದು, ಈ ಬಾರಿ ಹಿಂದೆಂದಿಗಿಂತಲೂ ಉಗ್ರರ ದಾಳಿಯ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಭಾರೀ ಬಿಗಿಬಂದೋಬಸ್ತ್‌ ಮಾಡಲಾಗಿದ್ದು, ಹೈಅಲರ್ಟ್‌ ಘೋಷಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಆ.15ರ ಸೋಮವಾರ ಕೆಂಪುಕೋಟೆಯ ಮೇಲೆ ರಾಷ್ಟ್ರ ಧ್ವಜಾರೋಹಣ ನಡೆಸಿ, ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸುಮಾರು 7000 ಜನರನ್ನು ಆಹ್ವಾನಿಸಲಾಗಿದ್ದು, ಗಣ್ಯಾತಿ ಗಣ್ಯರು ಭಾಗಿಯಾಗಲಿದ್ದಾರೆ.

ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಬಿಗಿ ಭದ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ. ದೆಹಲಿಯಲ್ಲಿ ಈಗಾಗಲೇ ಸೆಕ್ಷನ್‌ 144ರ ನಿಬಂಧನೆಗಳು ಜಾರಿಯಲ್ಲಿದ್ದು, ಯಾವುದೇ ಲೋಪಕ್ಕೆ ಅವಕಾಶವಿಲ್ಲದಂತೆ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ಹೇಳಿದ್ದಾರೆ. ಜೊತೆಗೆ ಪ್ರಮುಖ ಪ್ರದೇಶಗಳಲ್ಲಿ ಫೇಶಿಯಲ್‌ ರೆಕಗ್ನಿಷನ್‌ ವ್ಯವಸ್ಥೆಯಿರುವ ಕ್ಯಾಮರಾ ಅಳವಡಿಸಲಾಗಿದ್ದು, 10000 ಪೊಲೀಸರನ್ನು ಅಳವಡಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *