ಹುಬ್ಬಳ್ಳಿ: ಕಾಂಗ್ರೆಸ್ ನವರು ಇತಿಹಾಸ ಸರಿಯಾಗಿ ಓದಿಲ್ಲ, ಹೀಗಾಗಿ ಅಜ್ಞಾನ ಪ್ರದರ್ಶನ ಮಾಡತ್ತಾ ಇದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಸಾವರ್ಕರ್ ಅವರ ಇತಿಹಾಸ ಗೊತ್ತಿಲ್ಲ, ಕೇವಲ ಅಲ್ಪಸಂಖ್ಯಾತ ತುಷ್ಟಿಕರಣ ರಾಜಕಾರಣಕ್ಕಾಗಿ ವೀರ ಸಾವರ್ಕರ್ ಬಗ್ಗೆ ಅವಹೇಳನವಾಗಿ ಮಾತನಾಡುತ್ತಿದ್ದಾರೆ. ಅವರು ಮಿತಿಯನ್ನು ದಾಟುತ್ತಿದ್ದಾರೆ. ಹೀಗಾಗಿ ಇದು ಅವರ ಅವನತಿಗೆ ಕಾರಣವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನೆಹರೂ ಭಾವಚಿತ್ರವನ್ನು ಸರ್ಕಾರಿ ಜಾಹಿರಾತಿನಲ್ಲಿ ಕೈಬಿಟ್ಟ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅಧಿಕಾರಿಗಳು ಮಾತನಾಡುತ್ತಾರೆಂದು ಹಾರಿಕೆ ಉತ್ತರ ನೀಡಿ ಮುನ್ನಡೆದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

