Breaking News

ಹರ್ ಘರ್ ತಿರಂಗಾ ಅಭಿಯಾನದ ವೆಬ್‌ಸೈಟ್‌ನಲ್ಲಿ 5 ಕೋಟಿಗೂ ಹೆಚ್ಚು ಸೆಲ್ಫಿ


ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಹರ್ ಘರ್ ತಿರಂಗಾ’ ಅಭಿಯಾನದ ವೆಬ್‌ಸೈಟ್‌ನಲ್ಲಿ ಈವರೆಗೆ 5 ಕೋಟಿಗೂ ಹೆಚ್ಚು ಮಂದಿ ರಾಷ್ಟ್ರ ಧ್ವಜದ ಜತೆ ಸೆಲ್ಫಿ ತೆಗೆದು ಅಪ್ಲೋಡ್ ಮಾಡಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.

ಇದೊಂದು ಅದ್ಭುತ ಸಾಧನೆ ಎಂದು ಸಚಿವಾಲಯ ಬಣ್ಣಿಸಿದೆ. 76ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯಲ್ಲಿ ವೈಭವೋಪೇತವಾದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ 25 ವರ್ಷಗಳ ‘ಅಮೃತ ಕಾಲ’ದ ದೃಷ್ಟಿಕೋನವನ್ನು ಹಂಚಿಕೊಂಡಿದ್ದಾರೆ ಎಂದು ಸಚಿವಾಲಯ ಹೇಳಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *