Breaking News

ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಆದೇಶ ಹೊರಡಿಸಲಾಗುವುದು : ಸುಧಾಕರ್ ಭರವಸೆ


ಬೆಂಗಳೂರು: ಇನ್ನೊಂದು ತಿಂಗಳೊಳಗೆ ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರವಾಗಿ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯ ದೇವನಹಳ್ಳಿಯು ನಾಡಪ್ರಭು ಕೆಂಪೇಗೌಡರು ಆಡಳಿತ ನಡೆಸಿದ ಪ್ರದೇಶವಾಗಿದೆ. 54 ಪೇಟೆಗಳು, 340 ಕ್ಕೂ ಅಧಿಕ ಕೆರೆಗಳ ನಿರ್ಮಾಣಗೊಂಡಿವೆ. ಪರಿಸರ ಸಂರಕ್ಷಣೆ ಮೊದಲಾದ ಮಹತ್ವದ ಕ್ರಮಗಳನ್ನು ಅವರು ಜಾರಿ ಮಾಡಿದ್ದರು.

ಕೆಂಪೇಗೌಡರ ಆಡಳಿತದ ನಾಡಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿರುವುದು ಹೆಮ್ಮೆ ತಂದಿದ್ದು, ಇಂತಹ ದೇವನಹಳ್ಳಿ ಪ್ರದೇಶವನ್ನು ಜಿಲ್ಲಾ ಕೇಂದ್ರವಾಗಿಸಲು ಒಂದು ತಿಂಗಳೊಳಗೆ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *