Breaking News

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪಿಗೆ ಖಾಕಿ ಪಡೆಯಿಂದ ಗುಂಡೇಟು


ಶಿವಮೊಗ್ಗ: ನಗರದಲ್ಲಿ ವೀರ ಸಾರ್ವಕರ್  ಮತ್ತು ಟಿಪ್ಪು  ಫೋಟೋ ಗಲಾಟೆ ನಡೆದಿತ್ತು. ಆದ್ರೆ ಗಲಾಟೆಗೆ ಸಂಬಂಧಪಡದ 20 ವರ್ಷದ ಪ್ರೇಮ್ ಸಿಂಗ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು. ಚಾಕು ಇರಿತಕ್ಕೆ ಸಂಬಂಧಿಸಿದಂತೆ ತಡರಾತ್ರಿಯೇ ಇಬ್ಬರನ್ನು  ಬಂಧಿಸಲಾಗಿತ್ತು.

ಶಿವಮೊಗ್ಗದ ಫಲಕ್ ಪ್ಯಾಲೇಸ್ ಹಿಂದೆ ಅವಿತುಕೊಂಡಿದ್ದ ಆರೋಪಿಯ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಜಬೀವುಲ್ಲಾ ಬಂಧನಕ್ಕೆ ಮುಂದಾಗಿದ್ದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದನು. ಚಾಕು ತೋರಿಸಿ ಪರಾರಿಯಾಗಲು ಜಬೀವುಲ್ಲಾ ಪ್ರಯತ್ನಿಸಿದ್ದನು. ಈ ವೇಳೆ ಜಬೀವುಲ್ಲಾ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಇದುವರೆಗೂ ಜಬೀವುಲ್ಲಾ ಸೇರಿದಂತೆ ನಾಲ್ವರನ್ನ ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಜಬೀವುಲ್ಲಾ ಆಸ್ಪತ್ರೆಯಲ್ಲಿದ್ದು, ಉಳಿದ ಮೂವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ರಹಸ್ಯ ಸ್ಥಳದಲ್ಲಿ ಮೂವರು ಆರೋಪಿಗಳನ್ನು ದೊಡ್ಡಪೇಟೆ ಇನ್ಸ್‌ಪೆಕ್ಟರ್ ಅಂಜನ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿರುವ ಮಾಹಿತಿ ಲಭ್ಯವಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *