Breaking News

ಮುಖ್ಯಮಂತ್ರಿ ಸೂಚಿಸಿದರೆ ರಾಜೀನಾಮೆ ನೀಡುವೆ : ಮಾಧುಸ್ವಾಮಿ


ತುಮಕೂರು: ‘ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್‌ ಮಾಡುತ್ತಿದ್ದೇವೆ’ ಎಂಬ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ ಅವರ ಹೇಳಿಕೆಯಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ರಾಜಕೀಯವಾಗಿ ಇಕ್ಕಟ್ಟಿಗೆ ಸಿಲುಕಿದೆ. ಘಟನೆಗೆ ಸಂಬಂಧಿಸಿದಂತೆ ಮಾಧುಸ್ವಾಮಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿವರಣೆ ನೀಡಿದ್ದು, ಮುಖ್ಯಮಂತ್ರಿ ಸೂಚಿಸಿದರೆ ರಾಜೀನಾಮೆ ನೀಡುವೆ ಎಂದು ಪ್ರಕಟಿಸಿದ್ದಾರೆ.

ಈ ವಿವಾದವನ್ನು ರಾಜಕೀಯ ಅಸ್ತ್ರವಾಗಿ ಕೈಗೆತ್ತಿಕೊಂಡಿರುವ ಕಾಂಗ್ರೆಸ್‌ ಪಕ್ಷ, ಸರ್ಕಾರದ ಅಸಮರ್ಥತೆ ಸಚಿವರ ಹೇಳಿಕೆಯಿಂದಲೇ ಸಾಬೀತಾಗಿದೆ. ಇಂತಹ ಸರ್ಕಾರ ಯಾವ ಪುರುಷಾರ್ಥಕ್ಕೆ ಇರಬೇಕು ಎಂದು ವಾಗ್ದಾಳಿ ನಡೆಸಿದೆ. ಅದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಮಾಧುಸ್ವಾಮಿ ಅವರ ಬಳಿ ಮಾತನಾಡಿದ್ದೇನೆ. ಅವರ ಹೇಳಿಕೆಯನ್ನು ಅಪಾರ್ಥ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *