Breaking News

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ : ಶ್ರೀರಾಮುಲು


ಬಳ್ಳಾರಿ : ಭಗವಂತ ಅವಕಾಶ ಕೊಟ್ಟರೆ ಕಾಂಗ್ರೆಸ್‌ ಪಕ್ಷದಿಂದ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ನನಗೂ ಇದೆ’ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ಅಲ್ಲದೆ, ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆದ್ದಿದ್ದು ನಮ್ಮ ನಡುವಿನ ಒಳ ಒಪ್ಪಂದದಿಂದ ಎಂಬ ಗುಟ್ಟನ್ನೂ ಅವರು ಬಹಿರಂಗಪಡಿಸಿದ್ದಾರೆ.

ನಗರದ ಜಿಲ್ಲಾ ಕುರುಬರ ಸಂಘದ ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾನು ಕುರುಬ ಸಮುದಾಯದ ವಿರೋಧಿಯಲ್ಲ. ನನ್ನನ್ನು ತಪ್ಪಾಗಿ ತಿಳಿದುಕೊಳ್ಳಬೇಡಿ. ಹಿಂದುಳಿದ ಸಮುದಾಯವನ್ನು ನಾನೆಂದೂ ಬಿಟ್ಟುಕೊಡುವುದಿಲ್ಲ. ನಾವೆಲ್ಲರೂ ಒಂದೇ. ರಾಜಕೀಯಕ್ಕಾಗಿ ವಿರೋಧ ಮಾಡುತ್ತೇವೆಯೇ ಹೊರತು, ನಾವಿಬ್ಬರೂ (ಸಿದ್ದರಾಮಯ್ಯ-ಶ್ರೀರಾಮುಲು) ದೋಸ್ತಿಗಳು ಎಂದು ಹೇಳಿದರು.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *