ಬೆಂಗಳೂರು: ಕಳೆದ 75 ವರ್ಷದಲ್ಲಿ ರಾಷ್ಟ್ರ ಧ್ವಜ ಹಾರಿಸಿರದ ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿದೆ ಅದರಂತೆ ಮುಂಬರುವ ಗಣೇಶ ಹಬ್ಬವನ್ನು ಕೂಡಾ ಈ ಮೈದಾನದಲ್ಲಿ ಆಚರಿಸಲು ಸಿಎಂ ಜೊತೆ ಮಾತುಕತೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜ ಪೇಟೆ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆ ಮಾಡುವ ಕುರಿತು ಜಿಲ್ಲಾಡಳಿತಕ್ಕೆ ಮನವಿ ಪತ್ರಗಳು ಬಂದಿದ್ದು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು ಅಲ್ಲದೆ ಈಗ ಆ ಜಾಗ ಕಂದಾಯ ಇಲಾಖೆಗೆ ಸೇರಿದೆ ಅಲ್ಲಿ ಏನು ಆಗಬೇಕು ಎಂದು ತೀರ್ಮಾನ ಮಾಡುವ ಅಧಿಕಾರ ಸರ್ಕಾರಕ್ಕೆ ಇದೆ ಎಂದರು.
75 ವರ್ಷದಲ್ಲಿ ಆ ಮೈದಾನದಲ್ಲಿ ಧ್ವಜ ಹಾರಸಿರಲಿಲ್ಲ ಈಗ ನಾನು ಕಂದಾಯ ಸಚಿವನಾದ ಬಳಿಕ ಮೊದಲ ಭಾರಿ ಧ್ವಜ ಹಾರಸಿದ್ದೇವೆ ಇದಕ್ಕೆ ಅಲ್ಲಿನ ಸ್ಥಳಿಯರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

