Breaking News

ಮಾಜಿ ಸಿಎಂಗೆ ಬಿಜೆಪಿ ಯಲ್ಲಿ ಉನ್ನತ ಸ್ಥಾನ


ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅಂತರ ಕಾಯ್ದುಕೊಂಡು ರಾಜ್ಯದಲ್ಲಿ ಬಿಜೆಪಿ ಪಕ್ಷ ಸಂಘಟಿಸಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎನ್ನುವ ಬಿಜೆಪಿ ಹೈಕಮಾಂಡ್ ತಂತ್ರಗಾರಿಕೆ ವಿಫಲವಾಗಿದ್ದು ಮತ್ತೆ “ಹಳೆಯ ಗಂಡನ ಪಾದವೇ ಗತಿ” ಎನ್ನುವ ಗಾದೆ ಮಾತಿನಂತೆ ಯಡಿಯೂರಪ್ಪ ಅವರನ್ನ ವಿಶ್ವಾಸಕ್ಕೆ ತಗೆದುಕೊಂಡು ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದೆ.

ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಕೆಳಗಿಳಿಸಿದ ನಂತರ ಬಿಜೆಪಿ ಹೈಕಮಾಂಡ್ ತಾನಂದುಕೊಂಡಂತೆ ಬಿಎಸ್​​ವೈ ಅವರಿಂದ ಅಂತರ ಕಾಯ್ದುಕೊಂಡೇ ಸರ್ಕಾರ ಮತ್ತು ಪಕ್ಷ ಸಂಘಟನೆಯಲ್ಲಿ ತೊಡಗಿತ್ತು. ಆದರೆ, ಪ್ರಬಲ ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕರಾದ ಯಡಿಯೂರಪ್ಪ ದೂರವಿಟ್ಟು ಚುನಾವಣೆ ಎದುರಿಸುವುದು ಕಷ್ಟವೆನ್ನುವ ಕಹಿ ಸತ್ಯ ಅರಿತ ಬಿಜೆಪಿ ವರಿಷ್ಠರು ಬಿಎಸ್​ವೈ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರೂ ಹುಬ್ಬೇರಿಸುವಂತಹ ಹುದ್ದೆಯನ್ನು ನೀಡಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *