ವಿಜಯನಗರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೂಡ್ಲಿಗಿ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಮೂಲದ ಗಣೇಶ್ (19) ಹಾಗೂ ಧರ್ಮರಾಜ್( 24) ಬಂಧಿತ ಆರೋಪಿಗಳು.ಆರೋಪಿಗಳು ವಿಜಯನಗರ ಜಿಲ್ಲೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಂಗ್ರಹಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಕೂಡ್ಲಿಗಿ ಪೊಲೀಸರು, ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ₹66,828 ಮೌಲ್ಯದ 2,335 ಕೆ.ಜಿ ಅಕ್ಕಿ ಮತ್ತು ಮಿನಿ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

