Breaking News

ಸಿಎಂ ನ್ನು ಭೇಟಿಮಾಡಿದ ಡಾ. ರಾಜ್‌ಕುಮಾರ್ ಕುಟುಂಬದ ಸದಸ್ಯರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಚಿತ್ರ ನಟ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ಡಾ. ರಾಜ್‌ಕುಮಾರ್ ಕುಟುಂಬದ ಸದಸ್ಯರು ಬೆಂಗಳೂರಿನ ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವರನಟ ಡಾ. ರಾಜಕುಮಾರ್ ಸಮಾಧಿ ಅಭಿವೃದ್ಧಿಗೆ ಸಂಬಂಧಪಟ್ಟಂತೆ ರಾಘವೇಂದ್ರ ರಾಜಕುಮಾರ್ ಅವರು ಸಿಎಂ ಜೊತೆ ಚರ್ಚೆ ನಡೆಸಿದರು. ಇದಕ್ಕೆ ಸಂಬಂಧಪಟ್ಟಂತೆ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ಸಿಎಂ ಬೊಮ್ಮಾಯಿ ಅವರು ವೀಕ್ಷಣೆ ಮಾಡಿದರು.

ಯೋಜನೆಗೆ ಆಗಬಹುದಾದ ಖರ್ಚುವೆಚ್ಚಗಳ ಬಗ್ಗೆ ಲೆಕ್ಕಾಚಾರಗಳನ್ನು ಲೋಕೋಪಯೋಗಿ ಇಲಾಖೆಯಿಂದ ತರಿಸಲು ಸಿಎಂ ಸೂಚನೆ ನೀಡಿದರು. ಇಲಾಖೆಯಿಂದ ಯೋಜನೆಯ ರೂಪರೇಷೆ ತಯಾರದ ಬಳಿಕ ಮತ್ತೊಂದು ಸುತ್ತಿನ ಸಭೆ ನಡೆಸೋಣ ಎಂದು ಇದೇ ಸಂದರ್ಭದಲ್ಲಿ ರಾಜ್ ಕುಮಾರ್ ಕುಟುಂಬ ಸದಸ್ಯರಿಗೆ ಸಿಎಂ ಹೇಳಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *