ಮಡಿಕೇರಿ: ಬಿಜೆಪಿ ಕಾರ್ಯಕರ್ತರು ತಮ್ಮ ಕಾರಿಗೆ ಮೊಟ್ಟೆಎಸೆದ ಘಟನೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೂ ಮೊಟ್ಟೆಎಸೆಯಲು ಬರಲ್ವಾ?, ನಾವು ಹೋರಾಟ ಶುರು ಮಾಡಿದರೆ ಮುಖ್ಯಮಂತ್ರಿ ಎಲ್ಲೂ ಓಡಾಡೋಕೆ ಆಗಲ್ಲ ಎಂದು ಬಿಜೆಪಿ ಮುಖಂಡರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿಯ ಸಕ್ರ್ಯೂಟ್ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಲ್ಲಿ ನಡೆದಿರುವ ಕಳಪೆ ಕಾಮಗಾರಿಗಳನ್ನು ನಾನು ಬಂದು ನೋಡುತ್ತೇನೆಂದು ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸುತ್ತಿದ್ದಾರೆ. ಈ ಬಾರಿ ಕೊಡಗಿನಲ್ಲಿ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಅಂತ ಬಿಜೆಪಿಯವರು ಹತಾಶರಾಗಿದ್ದಾರೆ. ಹೀಗಾಗಿ ಪ್ರತಿಭಟನೆ ಮಾಡಿದ್ದಾರೆ. ನಮ್ಮ ಕಾರ್ಯಕರ್ತರು ಬೀದಿಗಿಳಿದರೆ ಬಿಜೆಪಿಯವರಿಗೆ ಕೊಡಗಿನಲ್ಲೇ ತಿರುಗಾಡಲು ಆಗುವುದಿಲ್ಲ ಎಂದು ಕಿಡಿಕಾರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

