Breaking News

ನಾಳೆ‌ ಲವ್ 360 ಸಿನಿಮಾ ಬಿಡುಗಡೆ


ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿದೆ. ಅದರಲ್ಲೂ ಸಿದ್ದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೇ” ಹಾಡಂತೂ ಭಾರಿ ಜನಪ್ರಿಯವಾಗಿದೆ.

ಲವ್ 360 ಶೀರ್ಷಿಕೆಯಿಂದಲೇ ಸ್ಯಾಂಡಲ್​ವುಡ್​ನಲ್ಲಿ ಸೌಂಡ್ ಮಾಡುತ್ತಿರುವ ಸಿನಿಮಾ. ಮೊಗ್ಗಿನ ಮನಸ್ಸು, ಕೃಷ್ಣನ್ ಲವ್ ಸ್ಟೋರಿ ಸಿನಿಮಾಗಳ ನಿರ್ದೇಶಕ ಶಶಾಂಕ್ ನಿರ್ದೇಶನದ ಚಿತ್ರ ಲವ್ 360 ಸಿನಿಮಾ‌ ನಾಳೆ 150ಕ್ಕೂ ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ. ಈ ಚಿತ್ರದ ಥಿಯೇಟ್ರಿಕಲ್ ಟ್ರೇಲರ್ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅನಾವರಣ ಮಾಡಿ, ಮೆಚ್ಚುಗೆಯ ಮಾತುಗಳನ್ನೂ ಹೇಳಿದ್ದರು.

ಇದೊಂದು ಕ್ಯೂಟ್ ಲವ್ ಸ್ಟೋರಿ ಸಿನಿಮಾವಾಗಿದ್ದು, ಹಾಡುಗಳು ಹಾಗೂ ಟ್ರೈಲರ್​ನಿಂದ ಸದ್ದು ಮಾಡುತ್ತಿರುವ ಲವ್ 360 ಸಿನಿಮಾ ಸಹಜವಾಗಿ ಸ್ಯಾಂಡಲ್​ವುಡ್​ನಲ್ಲಿ ಕುತೂಹಲ ಹುಟ್ಟಿಸಿದೆ. ಯುವ ನಟ ಪ್ರವೀಣ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ರಚನಾ ಇಂದರ್ ನಾಯಕಿಯಾಗಿ ಗಮನ ಸೆಳೆದಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *