Breaking News

ಕಾಲೇಜಿನಲ್ಲಿ ಲೈಂಗಿಕ ದೌರ್ಜನ್ಯ: ಬೃಹತ್ ಪ್ರತಿಭಟನೆ

ಧಾರವಾಡ: ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಖಂಡಿಸಿ ಎಬಿವಿಪಿ ಸಂಘಟನೆ ನೇತೃತ್ವದಲ್ಲಿ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಇತ್ತೀಚೆಗೆ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಜರುಗಿಸಬೇಕು.

ಸದ್ಯ ವಿಶ್ವೇಶ್ವರಯ್ಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಪ್ರತಿಭಟನನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.

Share News

About Shaikh BigTv

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *