Breaking News

ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು ಮತ್ತು ಅದನ್ನು ಖಂಡಿಸುತ್ತೇನೆ : ಜೋಶಿ

ಧಾರವಾಡ : ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭಾ ವಿರೋಧ ಪಕ್ಷದ ನಾಯಕ
ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು ಮತ್ತು ಅದನ್ನು ಖಂಡಿಸುತ್ತೇನೆ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಲಾದ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕರು, ಎಲ್ಲಿ ಬೇಕಾದರು ಅವರು ಹೋಗಿ ಪರಿಶೀಲನೆ ಮಾಡುವ ಹಕ್ಕು ಅವರಿಗಿದೆಎಂದರು. ಆದ್ರೆ, ವೀರ ಸಾವರ್ಕರ ಬಗ್ಗೆ ಮಾತನಾಡುವ ವೇಳೆ ಯಾರ ಮನಸ್ಸಿಗೂ ನೋವು ಆಗದಂತೆ ಮಾತನಾಡಬೇಕು ಅದು ಮೊದಲ ಎಲ್ಲರೂ ತಿಳಿದುಕೊಳ್ಳಬೇಕು ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಈ ಹಿಂದೆಯೇ ವೀರ ಸಾವರ್ಕರ ಬಗ್ಗೆ ಮಹಾತ್ಮಾ ಗಾಂಧಿಯವರೆ ಮೆಚ್ಚುಗೆ ಮಾತನ್ನು ಆಡಿದ್ದಾರೆ. ಅವರನ್ನು ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಬ್ರಿಟಿಷರಿಗೆ ಪತ್ರ ಬರೆದಿದ್ರು ಇದು ಗೊತ್ತಿಲ್ಲವೇ. ಇನ್ನು ಭಾರತ ದೇಶದ ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದ ದಿವಂಗತ ಶ್ರೀಮತಿ ಇಂದಿರಾಗಾಂಧಿ ಅವರು ಸಹ ವೀರ ಸಾವರ್ಕರ ಭಾರತ ದೇಶ ಗುರುತಿಸಲ್ಪಡುವ ಒಬ್ಬ ವ್ಯಕ್ತಿ ಎಂದು ಹೇಳಿದ್ದರು. ಇಂತವರು ಒರಿಜಿನಲ್ ಕಾಂಗ್ರೇಸ್ ನವರು ವೀರ ಸಾವರ್ಕರ ಬಗ್ಗೆ ತಿಳಿದುಕೊಂಡಿದ್ದರು ಎಂದರು.

ಈಗಿರುವ ಕಾಂಗ್ರೇಸ್ ನಕಲಿ ಕಾಂಗ್ರೇಸ್

ಆದ್ದರಿಂದ ನಾವು ಪದೇ ಪದೇ ಹೇಳುವುದು ಇಂದಿನ ಕಾಂಗ್ರೆಸ್ ನಾಯಕರು ನಕಲಿ ನಾಯಕರು. ಸೋನಿಯಾ ಹಾಗೂ ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಸಾವರ್ಕರ ಬಗ್ಗೆ ಟಿಕೀಸುತ್ತಿದ್ದಾರೆ ಇದು ಸರಿಯಲ್ಲ. ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭಾ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ನಕಲಿ ಕಾಂಗ್ರೆಸ್ಸಿನ ನಕಲಿ ಕಾಂಗ್ರೆಸ್ಸಿಗ.‌ ಸಿದ್ದರಾಮಯ್ಯನವರು, ಜನತಾ ಪರಿವಾರದಲ್ಲಿದ್ದಾಗ ಇದೆ ಸೋನಿಯಾ ಗಾಂಧಿಯನ್ನು ಟೀಕಿಸುತ್ತಿದ್ದರು ಈಗ ವೀರಾವೇಷದ ಭಾಷಣ ಮಾಡುವಾಗ ಸಿದ್ದರಾಮಯ್ಯ, ಒಮ್ಮೊಮ್ಮೆ ಕಾಂಗ್ರೇಸ್ಸನ್ನು ಕಿತ್ತೊಗೆಯಬೇಕು ಎಂದು ಹೇಳುತ್ತಾರೆ ಈ ಹಿಂದೆ ಈ ಮಾತನ್ನು ಹೇಳಿದ್ದಾರೆ .

ಅವರ ಮನಸ್ಥಿತಿ ಇನ್ನು ಬದಲಾಗಿಲ್ಲ ಆದ್ದರಿಂದ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭಾ ವಿರೋದ ಪಕ್ಷದ ನಾಯಕರಾದ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ತಪ್ಪು, ಅದು ಸಮರ್ಥನಿಯವಲ್ಲ. ಯಾರ ಮೇಲೂ ಮೊಟ್ಟೆ ಎಸೆಯುವದಾಗಲಿ, ಕಪ್ಪು ಪಟ್ಟಿ ಪ್ರದರ್ಶಿಸುವದಾಗಲಿ ಮಾಡಬಾರದು ಇದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಹೇಳಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *