Breaking News

ಸಿದ್ದರಾಮಯ್ಯಗೆ ಭದ್ರತೆ ಹೆಚ್ಚಿಸುವಂತೆ ಸೂಚನೆ : ಸಿಎಂ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಭದ್ರತೆ ಹೆಚ್ಚಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇದೆ ಎಂಬ ಹೇಳಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಪೊಲೀಸ್‌ ಮಹಾನಿರ್ದೇಶಕರನ್ನು ಕರೆಸಿಕೊಂಡು ಚರ್ಚಿಸಿದ್ದು, ವಿರೋಧ ಪಕ್ಷದ ನಾಯಕರ ಭದ್ರತೆಯನ್ನು ತಕ್ಷಣವೇ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದೇನೆ’ ಎಂದರು.

‘ಸಿದ್ದರಾಮಯ್ಯ ಅವರ ಜತೆಗೂ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಅವರಿಗೆ ಅಥವಾ ಅವರ ಸಿಬ್ಬಂದಿಗೆ ಬೆದರಿಕೆ ಕರೆ ಬಂದಿದ್ದರೆ ಅಂತಹ ಮಾಹಿತಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದೇನೆ. ಈ ವಿಷಯದ ಕುರಿತು ಸಮಗ್ರವಾಗಿ ತನಿಖೆ ನಡೆಸಲಾಗುವುದು’ ಎಂದು ತಿಳಿಸಿದರು.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *