ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್ ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನಲಪಾಡ್ ನಾಲಿಗೆ ಹರಿಬಿಟ್ಟಿದ್ದಾರೆ. ನಾವು ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದು ನಲಪಾಡ್ ಹೇಳಿದ್ದಾರೆ.
ಕೊಡಗಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ಲೈವ್ ನಲ್ಲಿ ನಲಪಾಡ್ ಮಾತನಾಡಿ ವಿವಾದಿತ ಹೇಳಿಕೆ ಕೊಟ್ಟಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಪ್ರತಿಭಟನೆಗೆ ಮುಂದಾದ ನಲಪಾಡ್ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರ ನಡುವೆ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದಕ್ಕೆ ಆಕ್ರೋಶ ಹೆಚ್ಚಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ಸಿಎಂ ಬೊಮ್ಮಾಯಿ ನಿರಾಕರಿಸಿದ್ದಾರೆ.
ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ಈ ಬಾರಿ ಅವಾಚ್ಯವಾಗಿ ಮಾತನಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ನಾವು ಸಚಿವೆ ಶಶಿಕಲಾ ಜೊಲ್ಲೆಗೆ ಹುಟ್ಟಿದವರಲ್ಲ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

