Breaking News

ಸೆಟ್ ನಲ್ಲಿ ಕಿರಿಕ್ ಮಾಡಿಕೊಂಡ ಅನಿರುದ್ಧ : 2 ವರ್ಷ ಬ್ಯಾನ್


ಝೀಕನ್ನಡದಲ್ಲಿ ಪ್ರಸಾರವಾಗುವ ಖ್ಯಾತಿ ಧಾರಾವಾಹಿ ಜೊತೆ ಜೊತೆಯಲ್ಲಿ ತಂಡದಲ್ಲಿಎಲ್ಲವೂ ಸರಿ ಇಲ್ಲಅನ್ನೋದು ಮತ್ತೆ ಸಾಭೀತಾಗಿದೆ. ಧಾರಾವಾಹಿಯ ಆರ್ಯವರ್ಧನ್ ಪಾತ್ರಧಾರಿ ಹಾಗೂ ತಂತ್ರಜ್ಞರ ಜೊತೆ ಕಿರಿಕ್ ಮಾಡಿಕೊಂಡಿದ್ದು ಇದೀಗ ನಟ ಅನಿರುದ್ಧ್ ಅವರನ್ನು2 ವರ್ಷಗಳ ಕಾಲ ಬ್ಯಾನ್ ಮಾಡಲಾಗಿದೆ.

‘ಜೊತೆ ಜೊತೆಯಲಿ’ ಧಾರಾವಾಹಿ ಚಿತ್ರೀಕರಣವನ್ನು ಅರ್ಧಕ್ಕೆ ಬಿಟ್ಟು ಹೋಗಿದ್ದ ಅನಿರುದ್ಧ್ ವಿರುದ್ಧ ಕಿರುತೆರೆ ನಿರ್ಮಾಪಕರ ಸಂಘಕ್ಕೆ ದೂರು ನೀಡಲಾಗಿತ್ತು.ಈ ಬಗ್ಗೆ ನಿರ್ಮಾಪಕರ ಸಂಘದಲ್ಲಿ ಚರ್ಚೆ ನಡೆದಿದ್ದು ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದ್ದು, ಅನಿರುದ್ಧ್ ಅವರನ್ನು ಎರಡು ವರ್ಷಗಳ ಕಾಲ ಧಾರಾವಾಹಿ ಹಾಗೂ ರಿಯಾಲಿಟಿ ಶೋನಿಂದ ಬ್ಯಾನ್ ಮಾಡುವಂತಹ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಕಿರುತೆರೆಯ ಪ್ರಡ್ಯೂಸರ್ ಅಸೋಸಿಯೇಷನ್ ಅಧ್ಯಕ್ಷರಾದ ಭಾಸ್ಕರ್ ಮಂಗಾಡಹಳ್ಳಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಅನಿರುದ್ಧ್ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಭಾಸ್ಕರ್ ಮಂಗಾಡಹಳ್ಳಿ, ” ಅನಿರುದ್ಧ್ ಅವರ ವರ್ತನೆಯನ್ನು ಪರಿಗಣಿಸಿ ಎರಡು ದಿನ ಚರ್ಚೆ ಮಾಡಿದ್ದೇವೆ. ಕಿರುತೆರೆಯ ಎಲ್ಲಾ ನಿರ್ಮಾಪಕರ ಒಕ್ಕೊರಲಿನ ನಿರ್ಧಾರದಂತೆ ಅನಿರುದ್ಧ್ ಅವರನ್ನು ಎರಡು ವರ್ಷಗಳ ಕಾಲ ಯಾವುದೇ ಧಾರಾವಾಹಿ ಹಾಗೂ ರಿಯಾಲಿಟಿ ಶೋನಲ್ಲಿ ಹಾಕಿಕೊಳ್ಳುವಂತಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿದೆ.” ಎಂದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *