ಮೈಸೂರು: ಪ್ರಚೋದನಕಾರಿ ಹೇಳಿಕೆ ಆರೋಪದಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿದೆ.
ಬಿಜೆಪಿ ಮುಖಂಡ ತೋಟದಪ್ಪ ಬಸವರಾಜು ಎಂಬುವವರು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.
ಕೊಡಗಿನಲ್ಲಿ ತಮ್ಮ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ, ನಮಗೂ ಮೊಟ್ಟೆ ಎಸೆಯಲು ಬರಲ್ವಾ? ಕಾಂಗ್ರೆಸ್ ಕಾರ್ಯಕರ್ತರು ಹೋರಾಟ ಶುರು ಮಾಡಿದರೆ ಸಿಎಂ ಬೊಮ್ಮಾಯಿ, ಬಿಜೆಪಿ ನಾಯಕರು ಓಡಾಡಲು ಸಾಧ್ಯವಾಗಲ್ಲ ಎಂದು ಎಚ್ಚರಿಕೆ ನೀಡಿದ್ದರು. ಸಿದ್ದರಾಮಯ್ಯ ಅವರ ಈ ಹೇಳಿಕೆ ಬೆನ್ನಲ್ಲೇ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ಪ್ರಾರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

