ಸಾವರ್ಕರ್ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಡಿರುವ ಮಾತು ಈಗ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರನ್ನು ಕೆರಳಿಸಿದೆ. ಹೀಗಾಗಿ ಗುರುವಾರ ಮಡಿಕೇರಿಯಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿದ್ದರೆ, ಚಿಕ್ಕಮಗಳೂರಿನಲ್ಲಿ ಇಂದು ಕಪ್ಪು ಬಾವುಟ ಪ್ರದರ್ಶಿಸಲಾಗಿದೆ.
ಇದರ ಮಧ್ಯೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯನವರ ಪುತ್ರ ಶಾಸಕ ಯತೀಂದ್ರ, ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಸಾವರ್ಕರ್ ಕುರಿತು ನಮ್ಮ ತಂದೆಯವರು ಹೇಳಿಕೆ ನೀಡಿದ ಬಳಿಕ ಅವರಿಗೆ ಹಿಂದೂ ಪರ ಸಂಘಟನೆಗಳಿಂದ ಜೀವ ಬೆದರಿಕೆ ಇದೆ ಎಂದು ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕರಿಗೇ ರಾಜ್ಯ ಬಿಜೆಪಿ ಸರ್ಕಾರ ಭದ್ರತೆ ಕೊಡಲು ವಿಫಲವಾಗಿದೆ ಎಂದರೆ ಇನ್ನು ಜನಸಾಮಾನ್ಯರ ಗತಿಯೇನು ಎಂದು ಪ್ರಶ್ನಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಅಧಿಕಾರವಿದೆ. ಆದರೆ ಅದನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದ್ದು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಸರ್ಕಾರ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

