Breaking News

ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಅ.. 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ : ಮಾಜಿ ಸಿಎಂ



ಬೆಂಗಳೂರು; ನಿನ್ನೆ ಕೊಡಗು ಜಿಲ್ಲೆಯಲ್ಲಿ ಎದುರಾದ ಪ್ರತಿಭಟನೆಗೆ ಸಿದ್ದರಾಮಯ್ಯ ಫುಲ್‌ ಗರಂ ಆಗಿದ್ದಾರೆ. ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು.ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆಯನ್ನು ಖಂಡಿಸಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಇದೇ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ. ಬಿಜೆಪಿಯವರ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ’ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *