Breaking News

ಧರ್ಮ ವಿಭಜನೆ ಬಗ್ಗೆ ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ : ಯಡಿಯೂರಪ್ಪ


ಬೆಂಗಳೂರು: ಧರ್ಮ ವಿಭಜನೆ ಮಾಡಲು ಮುಂದಾಗಿರುವುದು ತಪ್ಪು ಎಂದು ಮನಃಪರಿವರ್ತನೆಯಾಗಿದ್ದರೆ ನಾನದನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸಿದ್ದರಾಮಯ್ಯ ಮತ್ತು ರಂಭಾಪುರಿ ಶ್ರೀಗಳ ನಡುವೆ ನಡೆದ ಮಾತುಕತೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶ್ರೀಗಳು ಮತ್ತು ಸಿದ್ದರಾಮಯ್ಯನವರ ನಡುವೆ ಏನು ಮಾತುಕತೆ ನಡೆದಿದೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಆದರೆ ಒಂದು ವೇಳೆ ವೀರಶೈವ ಲಿಂಗಾಯಿತ ಧರ್ಮ ಪ್ರತ್ಯೇಕಿಸಲು ತಾನು ಮುಂದಾಗಿರುವುದು ತಪ್ಪು ಎಂದು ಸಿದ್ದರಾಮಯ್ಯನವರಿಗೆ ತಪ್ಪಿನ ಅರಿವಾಗಿದ್ದರೆ ಸಂತೋಷ. ಇದಕ್ಕಿಂತ ಹೆಚ್ಚು ನಾನೇನು ಹೇಳಲಾರೆ ಎಂದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *