ಕೊಡಗು: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.
ಈ ಹಿಂದೆ ಕೊಡಗಿನ ನೆರೆಹಾನಿ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಆರೋಪಿ ಸಂಪತ್ ಸಿದ್ದು ಕಾರಿನತ್ತ ಮೊಟ್ಟೆ ತೂರಿದ್ದರು. ಈ ವಿಡಿಯೋ ವ್ಯಾಪಕ ವೈರಲ್ ಅಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ವಿರುದ್ಧ ತೀವ್ರ ಕಿಡಿಕಾರಿದ್ದ ಕಾಂಗ್ರೆಸ್ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು. ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಭದ್ರತೆ ಹೆಚ್ಚಿಸುವಂತೆ ಸಿಎಂ ಬೊಮ್ಮಾಯಿ ಸೂಚನೆ ನೀಡಿದ್ದರು. ಇನ್ನು ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ದೊರೆತಿದ್ದು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ, ನಾನು ಬಿಜೆಪಿಯಲ್ಲ, ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

