ಚಿಕ್ಕಬಳ್ಳಾಪುರ : ಹಲವು ಕಾರಣಗಳಿಂದ ಮುಂದೂಡಲಾಗಿದ್ದ ರಾಜ್ಯ ಬಿಜೆಪಿ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ಸೆ.8 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ವಿವಿಧ ಕಾರಣಗಳಿಂದಾಗಿ ಮುಂದೂಡಿಕೆಯಾಗಿದ್ದಂತ ಬಿಜೆಪಿಯ ಜನೋತ್ಸವ ಕಾರ್ಯಕ್ರಮವನ್ನು, ಮತ್ತೆ ನಡೆಸೋದಕ್ಕೆ ದಿನಾಂಕ ನಿಗಧಿಗೊಳಿಸಲಾಗಿದೆ. ಸೆ.1ರಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ. ಸೆ.8 ರಂದು ಗುರುವಾರ ಬೆಳಗ್ಗೆ 11 ಗಂಟೆಗೆ ಜನೋತ್ಸವ ಆಯೋಜಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

