Breaking News

ವೈಚಾರಿಕ ಭಿನ್ನಾಭಿಪ್ರಾಯಗಳ ನಡುವೆಯೂ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು- ಸಿಎಂ

ಹುಬ್ಬಳ್ಳಿ: ವೈಚಾರಿಕ ಭಿನ್ನಾಭಿಪ್ರಾಯಗಳ ನಡುವೆಯೂ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಎಲ್ಲ ರಾಜಕೀಯ ಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸ ವಿಚಾರಗಳ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಇರುವುದು ಸಹಜ. ಅದನ್ನು ರಾಜಕೀಕರಣ ಮಾಡಬಾರದು. ಪ್ರಜಾಪ್ರಭುತ್ವ ಜವಾಬ್ದಾರಿ ಅರಿತು ಯಾವ ವಿಷಯ ಎಷ್ಟರ ಮಟ್ಟಿಗೆ ಚರ್ಚಿಸಬೇಕು ಎಂಬುದನ್ನು ಅರಿತು ನಡೆಯಬೇಕು. ಕಾನೂನು-ಸುವ್ಯವಸ್ಥೆ ಹಾಳುಮಾಡುವ ಕೆಲಸ ಯಾರು ಕೂಡ ಮಾಡಬಾರದು ಎಂದರು.
ಇಂದಿರಾ ಗಾಂಧಿ ಅವರು ವೀರ ಸಾವರ್ಕರ್ ಅವರನ್ನು ದೇಶದ ಶ್ರೇಷ್ಠ ಪುತ್ರ ಎಂದು ಬಣ್ಣಿಸಿದ್ದರು. ಆದರೆ, ಅದೇ ಕಾಂಗ್ರೆಸ್ ನ ಮಣಿಶಂಕರ ಅಯ್ಯರ್ ಅವರು ಸಾವರ್ಕರ್ ಅವರನ್ನು ಅವಮಾನಿಸಿದ್ದರು. ಇತಿಹಾಸದ ವಿಚಾರಗಳ ಬಗ್ಗೆ ಕೆಲವರು ನಂಬಿಕೆ ಇಡುತ್ತಾರೆ. ಕೆಲವರು ವಿರೋಧ ವ್ಯಕ್ತ ಪಡಿಸುತ್ತಾರೆ. ಹಾಗಂತ ಬೀದಿಗೆ ಎಳೆದು ತರಬಾರದು ಎಂದರು.

ಕಳಸಾ ಬಂಡೂರಿ, ಮಹದಾಯಿ ಯೋಜನೆ ನೆನಗುದಿಗೆ ಬಿದ್ದಿಲ್ಲ. ಈಗಾಗಲೇ ಸಾಕಷ್ಟು ಪ್ರಗತಿಯಾಗಿದೆ. ಅರಣ್ಯ ಮತ್ತು ಪರಿಸರ ಸಂಬಂಧಿ ವಿಷಯ ಹಾಗೂ ಸಿಡಬ್ಲ್ಯುಸಿ ಅನುಮೋದನೆ ಅಂತಿಮ‌ ಹಂತದಲ್ಲಿದೆ. ಅನುಮೋದನೆ ದೊರೆತ ಬಳಿಕ ಕಾಮಗಾರಿ ಆರಂಭಿಸಲಾಗುವುದು ಎಂದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *