Breaking News

ತೆಲಂಗಾಣದ ಟಿ.ಆರ್‌. ಚಂದ್ರಶೇಖರ್‌ ರಾವ್‌ ನೇತೃತ್ವದ ಸರ್ಕಾರ ಕಿತ್ತೊಗೆಯುತ್ತೇವೆ : ಅಮಿತ್‌ ಶಾ


ಹೈದರಾಬಾದ್‌: ತೆಲಂಗಾಣದ ಟಿ.ಆರ್‌. ಚಂದ್ರಶೇಖರ್‌ ರಾವ್‌ ನೇತೃತ್ವದ ಸರ್ಕಾರ ಕಿತ್ತೊಗೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಲ್ಲಿ ಹೇಳಿದರು.

ಹೈದರಾಬಾದ್‌ನ ಬೇಗುಂಪೇಟ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್‌ ಶಾ, ಸಿಕಂದರಾಬಾದ್‌ನ ಉಜ್ಜಯಿನಿ ಮಹಾಂಕಾಳಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮುನುಗೋಡು ಉಪಚುನಾವಣೆಯ ಗೆಲುವು ತೆಲಂಗಾಣದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಆರಂಭದ ಹೆಜ್ಜೆಯಾಗಲಿದೆ. ಟಿಆರ್‌ಎಸ್‌ ಸರ್ಕಾರ ಉರುಳಿಸುವ ಪ್ರಕ್ರಿಯೆ ಆರಂಭವಾಗಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು.

ಮುನುಗೋಡು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೊಮಟಿ ರೆಡ್ಡಿ ರಾಜಗೋಪಾಲ್ ರೆಡ್ಡಿ ರಾಜೀನಾಮೆ ನೀಡಿದ್ದು, ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಈ ಕ್ಷೇತ್ರದ ಉಪ ಚುನಾವಣೆಗೆ ರಾಜಗೋಪಾಲ್‌ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್‌ ಮತ್ತು ಟಿಆರ್‌ಎಸ್ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *