Breaking News

ಬಸ್ -ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ : 2 ಸಾವು


ಧಾರವಾಡ :  ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ -ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಘಟಗಿಯ ಧಾರವಾಡ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ನಲ್ಲಿದ್ದವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ಗ್ರಾಮದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗೊಂಡಿದ್ದು, ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *