ಬೆಂಗಳೂರು : ರಾಜ್ಯ ಸರ್ಕಾರವು ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೌರ ಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಇನ್ನೆರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಗೋವಿಂದ ಕಾರಜೋಳ, ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇನ್ನೆರಡು ತಿಂಗಳಲ್ಲಿ ಕಾಯಂಗೊಳಿಸಲಾಗುವುದು. ಸಫಾಯಿ ಕರ್ಮಚಾರಿ ಸಮಸ್ಯೆ ಪರಿಹಾರ ಆಗುವವರೆಗೂ ತಲಾ 2 ಸಾವಿರ ರೂ. ನೀಡುತ್ತಿದೆ. ನೌಕರರನ್ನು ಕಾಯಂಗೊಳಿಸಲು ಇರುವ ಕಾನೂನು ತೊಡಕು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

