Breaking News

ಸೆ. 2ರಂದು ಮಂಗಳೂರಿಗೆ ಪ್ರಧಾನಿ ಆಗಮನ


ಮಂಗಳೂರು: ಸೆಪ್ಟೆಂಬರ್ 2 ಶುಕ್ರವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ  ಮಂಗಳೂರಿಗೆ ಆಗಮಿಸಲಿದ್ದಾರೆ.

ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಯೋಗ ದಿನಾಚರಣೆ ಸಂದರ್ಭದಲ್ಲಿ ಇತ್ತೀಚೆಗೆ ಬೆಂಗಳೂರು, ಮೈಸೂರಿಗೆ ಬಂದಿದ್ದರು.

ಪಣಂಬೂರುನಲ್ಲಿರುವ “ನವ ಮಂಗಳೂರು ಬಂದರು ಪ್ರಾಧಿಕಾರದ” ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಎನ್ ಎಂ ಪಿ ಟಿ ಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಬಂಗ್ರ ಕೂಳೂರಿನ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಕೇರಳದ ಕೊಚ್ಚಿಗೆ ಭೇಟಿ ನೀಡಿ, ಅಲ್ಲಿಂದ ಮಂಗಳೂರಿಗೆ ಬರಲಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *