Breaking News

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಚಿಕಿತ್ಸೆಗೆ ವಿದೇಶಕ್ಕೆ ಪ್ರಯಾಣ


ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್‌ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಆದರೆ ಯಾವಾಗ ಹೋಗುತ್ತಿದ್ದಾರೆ ಅಥವಾ ಯಾವ ಸ್ಥಳಕ್ಕೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಿಲ್ಲ. ಆದರೆ ಸೆಪ್ಟಂಬರ್‌ 4ರಂದು ರಾಹುಲ್‌ ಗಾಂಧಿ ಅವರು ‘ಮೆಹಂಗಾಯಿ ಪರ್‌ ಹಲ್ಲಾ ಬೋಲ್‌’ ಅಭಿಯಾನದಲ್ಲಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

‘ವೈದ್ಯಕೀಯ ಪರೀಕ್ಷೆಗೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿದೇಶಕ್ಕೆ ತೆರಳಲಿದ್ದಾರೆ. ನವದೆಹಲಿಗೆ ವಾಪಸ್‌ ಆಗುವ ಮುನ್ನ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲಿದ್ದಾರೆ. ಸೋನಿಯಾ ಅವರ ಜೊತೆ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಹೋಗುತ್ತಿದ್ದಾರೆ. ಸೆಪ್ಚೆಂಬರ್‌ 4ರಂದು ‘ಮೆಹಂಗಾಯಿ ಪರ್‌ ಹಲ್ಲಾ ಬೋಲ್‌’ ಅಭಿಯಾನವನ್ನು ಉದ್ದೇಶಿಸಿ ರಾಹುಲ್‌ ಗಾಂಧಿ ಭಾಷಣ ಮಾಡಲಿದ್ದಾರೆ’ ಎಂದು ಜೈರಾಮ್‌ ರಮೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *