ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ.
ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಂದಿನ 2 ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಇಂದಿನಿಂದ ಆಗಸ್ಟ್ 25ರವರೆಗೆ ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆ ಆಗುವ ಸಂಭವವಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

