Breaking News

ಪೌರಕಾರ್ಮಿಕ ಸಾವು ಹಿನ್ನಲೆ ಬಿ.ಸಿ ಪಾಟೀಲ ಸಹಾಯಧನ ವಿತರಣೆ


ಹಾವೇರಿ: ರಟ್ಟೀಹಳ್ಳಿ ಪಟ್ಟಣದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಪೌರಕಾರ್ಮಿಕ ನಾಗರಾಜ್ ಯಡಚಿ ಅವರ ಮನೆಗೆ ಕೃಷಿ ಸಚಿವ ಬಿ.ಸಿ ಪಾಟೀಲ ಅವರು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ₹50 ಸಾವಿರ ಸಹಾಯಧನವನ್ನು ಮೃತರ ಕುಟುಂಬಸ್ಥರಿಗೆ ನೀಡಿದರು.

ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮೃತ ಪೌರಕಾರ್ಮಿಕನ ಕುಟುಂಬಕ್ಕೆ ಸರ್ಕಾರದಿಂದ ₹5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದರು. ಪೌರಕಾರ್ಮಿಕ ನಾಗರಾಜ್ ಯಡಚಿ ಕೆಲಸ ಮಾಡುವ ಸಂಧರ್ಭದಲ್ಲಿ ವಿಷಜಂತುವೊಂದು ಕೈಗೆ ಕಚ್ಚಿ ಮೃತಪಟ್ಟಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಜಗದೀಶ ಕವಲಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ, ಅವರಿಗೆ ವೈಯಕ್ತಿಕವಾಗಿ ಬಿ.ಸಿ.ಪಾಟೀಲ ಅವರು ₹10 ಸಾವಿರ ನೆರವು ನೀಡಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *