Breaking News

ವೀರ ಸಾವರ್ಕರ್ ಫೋಟೋ ವಿವಾದದ ಮಧ್ಯೆಯೂ ನರೇಂದ್ರದಲ್ಲಿ ಅದ್ದೂರಿ ಮೆರವಣಿಗೆ

ಧಾರವಾಡ : ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ .

ಈ ವಿವಾದ ಇನ್ನೂ ಹಸಿರಿರುವಾಗಲೇ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಗಿದೆ .

101 ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮೆರಗು ಹೆಚ್ಚಿಸಿದರಲ್ಲದೇ ಈ ಮೆರವಣಿಗೆಗೆ ಶಾಸಕ ಅಮೃತ ದೇಸಾಯಿ ಅವರೇ ಚಾಲನೆ ನೀಡಿದರು .

ಚಕ್ಕಡಿಯಲ್ಲಿ ಸಾವರ್ಕರ್ ಭಾವಚಿತ್ರವನ್ನಿಟ್ಟು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು . ಅಲ್ಲದೇ ಸಾವರ್ಕರ್ ಪರ ಘೋಷಣೆಗಳನ್ನು ಕೂಗಿ ಸಾವರ್ಕರ್ ಹೋರಾಟದ ಬಗ್ಗೆ ಜಾಗೃತಿ ಮೂಡಿಸಲಾಯಿತು .

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *