Breaking News

ಧಾರವಾಡ ಜಿಲ್ಲಾದ್ಯಾಂತ ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭಿಸಲು ಆಗ್ರಹ

ಧಾರವಾಡ : ಜಿಲ್ಲಾದ್ಯಾಂತ ಹೆಸರು ಕಾಳು ಖರೀದಿ ಕೇಂದ್ರ ಕೂಡಲೇ ಪ್ರಾರಂಭಿಸಬೇಕು . ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ನವಲಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನವಲಗುಂದ , ಅಣ್ಣಿಗೇರಿ , ಹುಬ್ಬಳ್ಳಿ ತಾಲೂಕ ತಹಶೀಲ್ದಾರ ಮುಖಾಂತರ ಸರ್ಕಾರಕ್ಕೆ ಹೆಸರು ಕಾಳು ಖರೀದಿ ಕೇಂದ್ರ ಹಾಗೂ ಹಾನಿಗೊಳಗಾದ ಬೆಳೆಗಳಿಗೆ ಬೆಳೆ ಪರಿಹಾರ ಕೂಡಲೇ ನೀಡಬೇಕೆಂದು ಲಿಖಿತ ರೂಪದಲ್ಲಿ ಮನವಿಯನ್ನು ಸಲ್ಲಿಸಲಾಗಿತ್ತು , ಆದರೆ ಇಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ .

ಇದಕ್ಕೆ ಸರಕಾರದ ದಿವ್ಯ ನಿಲಕ್ಷವೇ ಪ್ರಮುಖ ಕಾರಣ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಲ್ ಹೆಸರಿಗೆ 7725 ರೂ ಇರುತ್ತದೆ . ಈಗ ವ್ಯಾಪಾರಸ್ಥರು ದಲ್ಲಾಳಿಗಳು ಮಾರುಕಟ್ಟೆಯಲ್ಲಿ ರೈತರು ಬೆಳದ ಹೆಸರು ಕಾಳಿಗೆ 4000 ರೂ ದಿಂದ 5000 ಸಾವಿರದ ವರೆಗೆ ಮಾತ್ರ ಖರೀದಿ ಮಾಡುತ್ತಿದ್ದು ಇದರಿಂದ ರೈತರಿಗೆ ತುಂಬಾ ಅನ್ಯಾಯವಾಗುತ್ತಿದೆ .ಮುಂಗಾರು ಹಂಗಾಮಿನಲ್ಲಿ ಸುರಿದ ಆಪಾರ ಮಳೆಯಿಂದ ಅತಿವೃಷ್ಟಿ ಉಂಟಾಗಿ , ರೈತರು ಬೆಳೆದ ಅಲ್ಪ ಸ್ವಲ್ಪ ಫಸಲಿಗೆ ಸೂಕ್ತ ಬೆಲೆ ಗದೆ ರೈತನು ಸಂಕಷ್ಟಕ್ಕೀಡಾಗುತ್ತಿದ್ದಾನೆ .

ಆದ್ದರಿಂದ ಕೂಡಲೇ ಸರ್ಕಾರ ಎಚ್ಚೆತ್ತು ಕೊಂಡು ಹೆಸರು ಕಾಳು ಖರೀದಿ ಕೇಂದ್ರ ಪ್ರಾರಂಭಿಸಿ ರೈತ ಪರ ನಿಲವು ತಾಳಬೇಕೆಂದು ‌. ಧಾರವಾಡ ಜಿಲ್ಲಾ ಜೆಡಿಎಸ್ ಪ್ರಧಾನಕಾರ್ಯದರ್ಶಿ ಶ್ರೀ ಪ್ರಕಾಶ ಅಂಗಡಿ ವಕೀಲರು ಆಗ್ರಹಿಸಿದ್ದಾರೆ . ಇಲ್ಲದಿದ್ದರೆ ಇದೇ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಎದರು ಆಮರಣ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವದು.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *