ತುಮಕೂರು : ಜಿಲ್ಲೆಯ ಶಿರಾ ಬಳಿಯ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟು ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.
ರಾಯಚೂರು ಮೂಲದ ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್, ಲಾರಿಗೆ ಡಿಕ್ಕಿಯೊಡೆದಿದೆ.
ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಗಾಯಾಳುಗಳನ್ನು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಕ್ರೂಸರ್ ನುಜ್ಜುಗುಜ್ಜಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

