Breaking News

ಕೆ.ಎಸ್. ಈಶ್ವರಪ್ಪಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಪತ್ರ


ಶಿವಮೊಗ್ಗ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಪತ್ರ ಬಂದಿದೆ.

ಅವರ ಆಪ್ತ ಸಹಾಯಕ ಈ ಕುರಿತಾಗಿ ಜಿಲ್ಲಾ ಪೊಲೀಸ್ ಅಧ್ಯಕ್ಷರಿಗೆ ದೂರು ನೀಡಿದ್ದಾರೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಬೆದರಿಕೆ ಪತ್ರ ಬಂದಿದೆ. ಪತ್ರದಲ್ಲಿ ಸ್ವಾತಂತ್ರ್ಯಕ್ಕೆ ಹೋರಾಡಿದ ಟಿಪ್ಪು ಸುಲ್ತಾನ್ ಬಗ್ಗೆ ನೀನು ಮುಸ್ಲಿಂ ಗೂಂಡಾ ಎಂದು ಹೇಳಿದೆಯಲ್ಲ, ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರಿನ ಕಾಲೇಜು ಕಟ್ಟಡ ಕಟ್ಟಲು ನಮ್ಮ ಮುಸ್ಲಿಂ ಸಿಮೆಂಟ್ ಬೇಕು. ಆದರೆ, ಮುಸ್ಲಿಂ ಸಮುದಾಯ ಬೇಡ, ನಾಚಿಕೆಯಾಗಬೇಕು. ನಾಲಿಗೆ ಕಟ್ ಮಾಡುತ್ತೇವೆ. ಹುಷಾರ್, ಬಾಲ ಬಿಚ್ಚಬೇಡ ಎಂದು ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಅವರು ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ. ನಾನು ಎಲ್ಲಾ ಮುಸ್ಲಿಂ ಸಮುದಾಯದವರನ್ನು ಬೈದಿಲ್ಲ. ಹರ್ಷ, ಪ್ರವೀಣ್ ನೆಟ್ಟಾರು, ಪ್ರೇಮ್ ಸಿಂಗ್ ಅವರ ಮೇಲೆ ದಾಳಿ ಮಾಡಿದವರು ಮುಸ್ಲಿಂ ಗೂಂಡಾಗಳು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *