Breaking News

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ


ನವದೆಹಲಿ: ಮಳೆಯ ಅಬ್ಬರದ ನಡಿವೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಒಂದೇ ದಿನದಲ್ಲಿ 10,725 ಜನರಲ್ಲಿ ಹೊಸದಾಗಿ ಸೋಂಕು ಸೋಂಕು ಪತ್ತೆಯಾಗಿದೆ.

ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 527488ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 94,047 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.59ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,37,57,385 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 23,50,665 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,10,82,34,347 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,92,837 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *