ಧಾರವಾಡ: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.
ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಪರಿಣಾಮ ಹಳಿಯಾಳ ಬೈಪಾಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

