Breaking News

ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು


ಬೆಂಗಳೂರು : ಪರ್ಸೆಂಟೇಜ್‌ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮ್ಮನೆ ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರೇನು ಸತ್ಯಹರಿಶ್ಚಂದ್ರರಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇನು ಸತ್ಯ ಹರಿಶ್ಚಂದ್ರರಾ? ಕಾಂಗ್ರೆಸ್‌ ಇದ್ದಾಗ ಎಲ್ಲಾ ಪ್ರಕರಣಗಳನ್ನು ತನಿಖೆ ಮಾಡುತ್ತಿದ್ದರೆ? ರಾಜಕೀಯವಾಗಿ ಮಾಡುತ್ತಿರುವ ಪ್ರಯತ್ನ ಇದಾಗಿದೆ. ಆಧಾರರಹಿತವಾಗಿ ಗುತ್ತಿಗೆದಾರರು ಸಹ ರಾಜಕಾರಣಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕೆಂಪಣ್ಣ ಅವರು ನನ್ನನ್ನು ಭೇಟಿಯಾದಾಗಲೂ ಸಾಕ್ಷ್ಯಾಧಾರಗಳಿದ್ದರೆ ಕೊಡಿ ಎಂದು ಹೇಳಿದ್ದೇನೆ. ಅವರ ಬೇಡಿಕೆಗಳನ್ನು ಈಡೇರಿಸಲಾಗಿದೆ. ಪ್ಯಾಕೇಜ್‌ ದೊಡ್ಡದಿದೆ ಎಂದಾಗ ತಾಲೂಕು ಮಟ್ಟದಲ್ಲಿ ಒಂದು ಕೋಟಿ ರು.ಗಿಂತ ಹೆಚ್ಚಿನ ಟೆಂಡರ್‌ ಆಗಬಾರದು ಎಂದು ಆದೇಶಿಸಲಾಗಿದೆ. ಅಂದಾಜು ಪಟ್ಟಿಯಲ್ಲಿ ಹೆಚ್ಚಿಗೆಯಾದರೆ ಪರಿಶೀಲಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಅಂದಾಜು ಪಟ್ಟಿಯ ಮುನ್ನವೇ ಸಂಪೂರ್ಣವಾಗಿ ತನಿಖೆಯಾಗುತ್ತದೆ. ಟೆಂಡರ್‌ ನಿಯಮಗಳನ್ನೂ ಸಹ ಪರಿಶೀಲಿಸುತ್ತಾರೆ. ಪಾರದರ್ಶಕವಾಗಿ ಕೆಲಸ ಮಾಡಲಾಗುತ್ತಿದೆ. ಗುತ್ತಿಗೆದಾರರು ಇದರ ಲಾಭ ಪಡೆದುಕೊಳ್ಳಬೇಕು ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *