Breaking News

ಇಂದಿನಿಂದ ಆ. 31ರವರೆಗೂ ಮಳೆ‌ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ಕರ್ನಾಟಕದಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ.

ಈ ಬಾರಿಯ ಗಣೇಶ ಚತುರ್ಥಿಯವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ.!

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *