Breaking News

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಡಾ.ಶಿವರಾತ್ರಿ ಮುರುಘಾ ಶರಣರ ವಿರುದ್ಧ ಆರೋಪ


ಮೈಸೂರು: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ.

ಇದು ಬಹಳಷ್ಟು ದಿನಗಳಿಂದ ನಡೆಯುತ್ತಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿಲ್ಲ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮೊರೆ ಹೋಗಿದ್ದರು. ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತು. ಮಕ್ಕಳ ಹೇಳಿಕೆಯಲ್ಲಿ ಸತ್ಯ ಇರುವುದರಿಂದ ಸ್ವಾಮೀಜಿ ವಿರುದ್ದ ಪೋಕ್ಸೊ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿ ಆದೇಶ ನೀಡಿತು. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣಗಳನ್ನು ಆ ಜಿಲ್ಲೆಗೆ ವರ್ಗಾಯಿಸುವ ಸಾಧ್ಯತೆಯಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *